ಬೆಂಗಳೂರು: ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸಲು ಜಾಗದ ಸಮಸ್ಯೆ ಉಂಟಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಬೆಂಗಳೂರು ನಗರದ ವ್ಯಾಪ್ತಿಯ 6 ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ನಗರದ ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತು ಮಾಡಲಾಗಿದ್ದು, ಇದನ್ನೊಳಗೊಂಡಂತೆ ನಗರದ ಒಟ್ಟು ಆರು ಕಡೆಗಳಲ್ಲಿ ಶವ ಸಂಸ್ಕಾರಕ್ಕೆ ಭೂಮಿಯನ್ನು ಮೀಸಲಿಡಲಾಗಿದೆ. ಈ ಪ್ರದೇಶಗಳಲ್ಲಿ ತೆರೆದ ಸ್ಥಳಗಳಲ್ಲಿ ಅಂತಿಮ ಸಂಸ್ಕಾರಕ್ಕೆ ಅವಕಾಶವನ್ನು ಒದಗಿಸಲಾಗುತ್ತದೆ ಎಂಬುದಾಗಿಯೂ ಸಚಿವರು ಹೇಳಿದ್ದಾರೆ
ಕೊರೋನಾ ಎರಡನೇ ಅಲೆಯ ತೀವ್ರತೆ ರಾಜ್ಯದಲ್ಲಿ ಹೆಚ್ಚಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತಂದಿದೆ. ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಯೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರದ ಮಂತ್ರಿಗಳು, ಅಧಿಕಾರಿಗಳು ಒಗ್ಗಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿಪಕ್ಷಗಳು ಆರೋಪ ಮಾಡುವಂತೆ ನಮ್ಮಲ್ಲಿ ಯಾವುದೇ ರೀತಿಯ ಒಡಕೂ ಇಲ್ಲ ಎಂದು ಅಶೋಕ್ ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.