ಬೆಂಗಳೂರು: ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 18 ಅಗತ್ಯ ಸೇವೆಗಳ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಕೇಂದ್ರ ಸ್ಥಾನ ಬಿಡದಂತೆಯೂ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ, ವಾರ್ತಾ, ಸಾರಿಗೆ, ಇಂಧನ, ಖಜಾನೆ, ಡಿಪಿಎಆರ್, ಪಶು ಸಂಗೋಪನೆ, ಕಾರ್ಮಿಕ, ಅರಣ್ಯ, ಕೃಷಿ, ಕೃಷಿ ಮಾರುಕಟ್ಟೆ, ತೋಟಗಾರಿಕೆಗೆ ಸಂಬಂಧಿಸಿದ ಒಟ್ಟು 18 ಇಲಾಖೆಗಳು ಕಡ್ಡಾಯ ಹಾಜರಾತಿ ಹೊಂದಿರಬೇಕು ಎಂದು ಸರ್ಕಾರ ಹೇಳಿದೆ.
ಈ 18 ಇಲಾಖೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರು ಕಡ್ಡಾಯ ಹಾಜರಿ ಹೊಂದಿರಬೇಕು. ಕೊರೋನಾ ನಿಯಂತ್ರಣ, ನಿರ್ವಹಣೆಯ ಹಿನ್ನೆಲೆಯಲ್ಲಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು. ಉಳಿದಂತೆ ಕಚೇರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ 50% ಸಿಬ್ಬಂದಿ ಇರಬೇಕು. ಇನ್ನುಳಿದ 50% ಸಿಬ್ಬಂದಿಗಳನ್ನು ಕೊರೋನಾ ಕರ್ತವ್ಯಕ್ಕೆ ನಿಯೋಜನೆ ಮಾಡುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶದಿಂದ ದೃಷ್ಟಿದೋಷ, ವಿಕಲಾಂಗರು, ಗರ್ಭಿಣಿಯರಿಗೆ ವಿನಾಯಿತಿ ನೀಡಲಾಗಿದೆ. ಈ ಆದೇಶ ಮೇ 4 ರ ವರೆಗೆ ಜಾರಿಯಲ್ಲಿರಲಿದೆ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.