ಬೆಂಗಳೂರು: ಕೋವಿಡ್ ವಾರ್ ರೂಂ ಸ್ಥಾಪಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್, ಕಾಂಗೆಸ್ನ ಎಸ್ಸಿ ಸಮುದಾಯದ ಯುವ ಕಾಂಗ್ರಸ್ ಉಪಾಧ್ಯಕ್ಷೆ ಭವ್ಯಾ ಅವರಿಗೆ ಧಮ್ಕಿ ಹಾಕಿದ ಘಟನೆ ನಡೆದಿದ್ದು, ಈ ಸಂಬಂಧ ಭವ್ಯ ಅವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿನ್ನೆ ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೊರೋನಾ ವಾರ್ ರೂಂ ಸಿದ್ಧತೆಯಲ್ಲಿದ್ದಾಗ ಅಲ್ಲಿಗೆ ತನ್ನ ಬೆಂಬಲಿಗರ ಜೊತೆಗೆ ಆಗಮಿಸಿದ ನಲಪಾಡ್ ಬೆದರಿಕೆ ಒಡ್ಡಿ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾಗಿ ಭವ್ಯ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆಯೂ ನಲಪಾಡ್ ಇದೇ ರೀತಿ ಬೆದರಿಕೆ ಒಡ್ಡಿರುವುದಾಗಿಯೂ ಭವ್ಯ ತಿಳಿಸಿದ್ದಾರೆ. ಅಲ್ಲದೆ ತಮ್ಮ ಮೇಲೆ ಹಲ್ಲೆ ನಡೆಸಲು ಮುಂದಾಗಿರುವುದಾಗಿಯೂ ಅವರು ದೂರಿನ ಪ್ರತಿಯಲ್ಲಿ ತಿಳಿಸಿದ್ದಾರೆ. ಅಲ್ಲದೆ ನಲಪಾಡ್ ಬಳಿಕ ಅತನ ಬೆಂಬಲಿಗರು ಸಹ ತಮಗೆ ಬೆದರಿಕೆ ಒಡ್ಡಿದ್ದಾಗಿ ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಈ ಪ್ರಕರಣದಡಿ ನಲಪಾಡ್ ಮತ್ತಾತನ ಬೆಂಬಲಿಗರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜೊತೆಗೆ ತಮಗೆ ನಲಪಾಡ್ ಮತ್ತು ಆತನ ಬೆಂಬಲಿಗರು ಏನು ಮಾಡುತ್ತಾರೋ ಎಂಬ ಭಯವಿದೆ. ಆದ್ದರಿಂದ ತಮಗೆ ರಕ್ಷಣೆ ನೀಡಿ ಎಂಬುದಾಗಿ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.