ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಕ್ಯೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ 50% ಗಳಷ್ಟು ಹಾಸಿಗೆಗಳನ್ನು ಸುಪರ್ದಿಗೆ ವಹಿಸುವಂತೆ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು ನಗರವನ್ನು 8 ವಲಯಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಪ್ರತಿ ವಲಯಕ್ಕೂ ಓರ್ವ ಉಪ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿಯ ಜಂಟಿ ಆಯುಕ್ತರ ನೇತೃತ್ವದಲ್ಲಿ ತಂಡಗಳ ರಚನೆ ಮಾಡಲಾಗಿದೆ. ಈ ತಂಡಗಳು ಮುಂದಿನ ಮೂರು ನಾಲ್ಕು ದಿನಗಳ ಕಾಲ ತಮ್ಮ ವ್ಯಾಪ್ತಿಯ ಆಸ್ಪತ್ರೆಗಳ ಪರಿಶೀಲನೆ ನಡೆಸುವಂತೆಯೂ ಸೂಚಿಸಲಾಗಿದೆ. ಈಗಾಗಲೇ ಖಾಸಗಿ ಆಸ್ಪತ್ರೆಗಳಿ ಸುಮಾರು 7000 ಗಳಷ್ಟು ಹಾಸಿಗೆಗಳನ್ನು ಸೋಂಕಿತರ ಚಿಕಿತ್ಸೆಗೆ ನೀಡಿದ್ದು, ಇನ್ನೂ 4 ಸಾವಿರಗಳಷ್ಟು ಹಾಸಿಗೆಗಳ ಅಗತ್ಯತೆ ಇದೆ. ಅದರಲ್ಲೂ ಆಕ್ಸಿಜನ್ ವ್ಯವಸ್ಥೆ ಇರುವ ಆಸ್ಪತ್ರೆಗಳನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೊಮ್ಮಾಯಿ ಸೂಚಿಸಿದ್ದಾರೆ.
ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಬಿಗಿ ಕ್ರಮಗಳನ್ನು ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿಯ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಅನಾವಶ್ಯಕವಾಗಿ ಬೆಂಗಳೂರಿಗೆ ಬರುವವರನ್ನು, ಅನಗತ್ಯ ಸುತ್ತಾಟ ನಡೆಸುವವರನ್ನು ನಿಯಂತ್ರಿಸುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನು ಮೀರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.