ಬೆಂಗಳೂರು: ನಗರದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ, ಕೊರೋನೇತರ ಕಾರಣಗಳಿಂದ ಮೃತಪಟ್ಟವರ ಶವಗಳನ್ನು ಸಂಬಂಧ ಪಟ್ಟವರಿಗೆ ನೀಡುವ ಕೆಲಸವನ್ನು ತ್ವರಿತವಾಗಿ ಹಸ್ತಾಂತರ ಮಾಡುವಂತೆ ನೋಡಿಕೊಳ್ಳಲು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆಸ್ಪತ್ರೆಗಳು ಮೃತರ ಶವಗಳನ್ನು ಹಸ್ತಾಂತರ ಮಾಡುವಲ್ಲಿ ಯಾವುದೇ ರೀತಿಯ ವಿಳಂಬ ಮನಸ್ಥಿತಿ ತೋರಿದಲ್ಲಿ, ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಡಿಸಿಎಂ ನೀಡಿದ್ದಾರೆ. ಈ ಸಂಬಂಧ ಕೋವಿಡ್ ನಿರ್ವಹಣಾಧಿಕಾರಿಗಳಿಗೂ ಅವರು ಖಡಕ್ ಆದೇಶ ನೀಡಿದ್ದಾರೆ.
ಆಸ್ಪತ್ರೆಗಳಿಂದ ಶವಗಳನ್ನು ತಡವಾಗಿ ಸಂಬಂಧಿಸಿದವರಿಗೆ ಹಸ್ತಾಂತರ ಮಾಡುವ ಪ್ರಕ್ರಿಯೆಯಿಂದಾಗಿ ಚಿತಾಗಾರಗಳಲ್ಲಿ ಸಮಸ್ಯೆ ಉದ್ಭವವಾಗುತ್ತದೆ. ಒಂದೇ ಬಾರಿ ಅನೇಕ ಮೃತದೇಹಗಳು ಮುಕ್ತಿಗಾಗಿ ಬಂದಲ್ಲಿ ಅವುಗಳ ನಿರ್ವಹಣೆಯೂ ಕಷ್ಟವಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಡಿಸಿಎಂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.