ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ತೆರಿಗೆದಾರರಿಗೆ ತುಸು ನಿರಾಳತೆ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ತೆರಿಗೆ ಪಾವತಿಸು ಕಾಲಮಿತಿಯನ್ನು ವಿಸ್ತರಿಸಿದೆ.
ತೆರಿಗೆ ವಿವಾದ ಪರಿಹಾರ ಯೋಜನೆಯಾದ ವಿವಾದ್ ಸೆ ವಿಶ್ವಾಸ್ ಅಡಿಯಲ್ಲಿ ಪಾವತಿಸಲು ಇದ್ದ ಗಡುವು ಅನ್ನು ಜೂನ್ 30 ರವರೆಗೆ ಎರಡು ತಿಂಗಳು ವಿಸ್ತರಿಸಿದೆ. ಆದಾಯ ತೆರಿಗೆ ಕಾಯ್ದೆಯಡಿ ಮೌಲ್ಯಮಾಪನ ಅಥವಾ ಮರುಮೌಲ್ಯಮಾಪನಕ್ಕಾಗಿ ಯಾವುದೇ ಆದೇಶವನ್ನು ರವಾನಿಸುವ ಸಮಯ ಮಿತಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ತೆರಿಗೆದಾರರು, ತೆರಿಗೆ ಸಲಹೆಗಾರರು ಮತ್ತು ಇತರ ಮಧ್ಯಸ್ಥಗಾರರಿಂದ ಬಂದ ಮನವಿಗಳನ್ನು ಅನುಸರಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಮೊದಲು ಏಪ್ರಿಲ್ 30 ರವರೆಗೆ ಇದನ್ನು ವಿಸ್ತರಣೆ ಮಾಡಲಾಗಿತ್ತು, ಆದರೆ ಕೋವಿಡ್ ಹಿನ್ನಲೆಯಲ್ಲಿ ಇದೀಗ ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.