ಬೆಂಗಳೂರು: ಕೊರೋನಾ ಎರಡನೇ ಅಲೆಯ ಪ್ರಭಾವ ಇನ್ನೂ 40 ದಿನಗಳ ಕಾಲ ಇರಲಿರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನಗತ್ಯ ಓಡಾಟ ನಡೆಸದಂತೆ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದರಿಂದ ಕೊರೋನಾದಿಂದ ಕೊಂಚ ಮಟ್ಟಿಗೆ ನಮ್ಮನ್ನು ನಾವು ಕಾಪಾಡಿಕೊಳ್ಳುವುದು ಸಾಧ್ಯ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರಿಂದ ಸೋಂಕಿನಿಂದ ರಕ್ಷಣೆ ಪಡೆಯಬಹುದು. ಅನಗತ್ಯ ಓಡಾಟಕ್ಕೂ ಬ್ರೇಕ್ ಹಾಕುವುದು ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಉತ್ತಮ ಎಂದು ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಲಕ್ಷಣಗಳು ಇಲ್ಲದೇ ಹೋದವರು ಸಹ ವರದಿಯಲ್ಲಿ ಪಾಸಿಟಿವ್ ಬಂದ ತಕ್ಷಣ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದು ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚಿನ ಹೊರೆ ಬೀಳುವಂತಾಗಲು ಮುಖ್ಯ ಕಾರಣವಾಗಿದೆ. ಸೋಂಕಿನ ಲಕ್ಷಣಗಳು ಇಲ್ಲದೇ ಇದ್ದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವುಳ್ಳವರು ಮಾತ್ರವೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಾದರೆ ಈ ಹೊರೆ ತಪ್ಪಲಿದೆ ಎಂದು ಹೇಳಿದ್ದಾರೆ.
ಅಲ್ಲದೆ ಯಾರೂ ಸಹ ಕೊರೋನಾ ವಿಚಾರಗಳಿಗೆ ಅನಗತ್ಯ ಗೊಂದಲಗಳನ್ನು ಮಾಡಿಕೊಳ್ಳಬೇಡಿ. ಭಾರತದಲ್ಲಿ ಸದ್ಯ ಎರಡನೇ ಅಲೆ ಬೀಸುತ್ತಿದೆ. ಆದರೆ ಇತರ ದೇಶಗಳಲ್ಲಿ ಮೂರು, ನಾಲ್ಕನೇ ಅಲೆಯನ್ನು ಎದುರಿಸುವಂತಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.