ಬೆಂಗಳೂರು: 2019 – 20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಮತ್ತೆ ಕೌನ್ಸಲಿಂಗ್ ನಡೆಸಿ ಒಂದು ಬಾರಿಗೆ ವರ್ಗಾವಣೆ ಮಾಡಲು ಸಚಿವ ಸಂಪುಟ ಸಮ್ಮತಿ ನೀಡಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ – 2020 ಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ, ಅಂಕಿತ ದೊರೆತ ಕೂಡಲೇ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ. 2020 – 21 ನೇ ಸಾಲಿನಲ್ಲಿನ ವರ್ಗಾವಣೆ ಪ್ರಕ್ರಿಯೆ ಸಂದರ್ಭದಲ್ಲಿ 2019 – 20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಗಾದ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡುವ ಪ್ರಸ್ತಾಪ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ – 2020 ರಲ್ಲಿ ನಡೆದಿರಲಿಲ್ಲ. ಕಳೆದ ನವೆಂಬರ್ 11 ರಂದು ಹೊರಡಿಸಿದ್ದ ವರ್ಗಾವಣೆ ಅಧಿಸೂಚನೆಯಲ್ಲಿ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿತ್ತು. ಆದರೆ ಅದಕ್ಕೆ ಕೆಎಟಿ ಮತ್ತು ಹೈಕೋರ್ಟ್ ತಡೆ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.