ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವ ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ನಡೆಯಲಿದ್ದ ಎಲ್ಲಾ ಚುನಾವಣೆಗಳನ್ನು ಮುಂದೂಡಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರ್ಕಾರ, ಇದೇ ಮೇ – ಜೂನ್ ಅವಧಿಯಲ್ಲಿ ಮುಕ್ತಾಯಗೊಳ್ಳಲಿರುವ 30 ಜಿಲ್ಲಾ ಪಂಚಾಯತ್ಗಳು, ಹೊಸದಾಗಿ ರಚನೆಯಾದವುಗಳು ಸೇರಿದಂತೆ 229 ತಾಲೂಕು ಪಂಚಾಯತ್ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯತ್ಗಳಿಗೆ ಸಂಬಂಧಿಸಿದಂತೆ ಆಯಾ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ತಾಲೂಕು ಪಂಚಾಯತ್ಗಳಿಗೆ ಆಯಾ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಥವಾ ಆ ಶ್ರೇಣಿಗೆ ಸಮನಾಗಿರುವ ಅಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡುವ ಅಧಿಕಾರವನ್ನು ಆಯಾ ಪ್ರಾದೇಶಿಕ ವಿಭಾಗದ ಆಯುಕ್ತರಿಗೆ ನೀಡಲಾಗಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ ಅವಧಿ ಮುಕ್ತಾಯವಾದ ದಿನದಿಂದ ಹೊಸ ಪ್ರಕ್ರಿಯೆ ಮುಗಿಯುವವರೆಗೆ ಆಡಳಿತಾಧಿಕಾರಿಗಳ ಅವಧಿ ಇರಲಿದೆ ಎಂದು ಈ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.