ಬೆಂಗಳೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಬೆಂಗಳೂರು ನಗರದಿಂದ ತಮ್ಮ ತಮ್ಮ ಊರಿನ ಹಾದಿ ಹಿಡಿದವರಿಗೆ ಅನುಕೂಲವಾಗುವಂತೆ ನಿನ್ನೆಯಿಂದಲೇ ರಾಜ್ಯ ರಸ್ತೆ ಸಾರಿಗೆ ನಿಗಮ 12 ಸಾವಿರ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಿದೆ.
ಈ ಸಂಬಂಧ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಮಾತನಾಡಿದ್ದು, ಇಂದು ರಾತ್ರಿ 9 ಗಂಟೆಯಿಂದ ಮುಂದಿನ 14 ದಿನಗಳ ಕಾಲ ರಾಜ್ಯದಲ್ಲಿ ಜನತಾ ಕರ್ಫ್ಯೂ ಹೇರಲಾಗಿದೆ. ಈ ಸಂದರ್ಭದಲ್ಲಿ ಉದ್ಯೋಗ ಸೇರಿದಂತೆ ಇನ್ನಿತರ ಕಾರಣಗಳಿಗಾಗಿ ಸಿಲಿಕಾನ್ ಸಿಟಿಗೆ ಬಂದವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಮತ್ತೆ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಅವರಿಗೆ ಅನುಕೂಲವಾಗುವಂತೆ ಈ ಸೇವೆಯನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಸಾರಿಗೆ ನಿಗಮದ ಮೂರು ವಿಭಾಗಗಳಿಂದ ರಾಜ್ಯದ ವಿವಿಧ ಭಾಗಗಳಿಗೆ ಹೆಚ್ಚುವರಿ 12 ಸಾವಿರ ಬಸ್ಸುಗಳನ್ನು ಓಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಬಸ್ಸುಗಳು ಇಂದು ರಾತ್ರಿಯಿಂದ ಆರಂಭವಾಗುವ ಕರ್ಫ್ಯೂ ಸಮಯಕ್ಕಿಂತ ಮೊದಲು ಸೇವೆ ನೀಡಲಿದೆ ಎಂದು ಸವದಿ ತಿಳಿಸಿದ್ದಾರೆ.
ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಊರಿಗೆ ತೆರಳುವ ಪ್ರಯಾಣಿಕರಿಂದ ಖಾಸಗಿ ಬಸ್ಸುಗಳು ಹೆಚ್ಚುವರಿ ಟಿಕೆಟ್ ಹಣ ವಸೂಲಿ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಈ ನಿಲುವು ಪ್ರಯಾಣಿಕರಿಗೆ ಕೊಂಚ ನಿರಾಳತೆಯನ್ನು ಒದಗಿಸಿದೆ ಎಂದೇ ಹೇಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.