ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಫಲಾನುಭವಿಗಳೆಲ್ಲರೂ ಕೊರೋನಾ ಲಸಿಕೆ ಪಡೆಯುವ ಮೂಲಕ ಕೊರೋನಾ ವಿರುದ್ಧ ಎಚ್ಚರ ವಹಿಸಬೇಕು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಳಕೆ ಮಾಡಲು ಬೆಡ್, ಆಕ್ಸಿಜನ್, ವೆಂಟಿಲೇಟರ್, ಔಷಧಗಳ ಕೊರತೆ ಇತ್ತು. ಇವೆಲ್ಲವುಗಳನ್ನೂ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಕರ್ಫ್ಯೂ ಸಂದರ್ಭದಲ್ಲಿ ಕೊರೋನಾ ಲಸಿಕೆ ನೀಡಲಾಗುವುದಿಲ್ಲ ಎಂಬ ಸುದ್ದಿ ಸಂಪೂರ್ಣ ಸುಳ್ಳು. ಜನತಾ ಕರ್ಫ್ಯೂ ಸಮಯದಲ್ಲಿಯೂ ಲಸಿಕೆಗಳನ್ನು ನೀಡುವ ನಿಟ್ಟಿನಲ್ಲಿ ಸರ್ಕಾರ ಸೂಚನೆ ನೀಡಿದ್ದು, ಆರೋಗ್ಯ ಇಲಾಖೆಯೂ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಜನರು ಮನೆಯಲ್ಲಿಯೂ ಮಾಸ್ಕ್ ಧರಿಸುವ ಮೂಲಕ ಕೊರೋನಾ ಸೋಂಕು ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.