ಬೆಂಗಳೂರು: ಕೊರೋನಾ ಸೋಂಕಿನಿಂದಾಗಿ ರಾಜ್ಯ ತತ್ತರಿಸಿ ಹೋಗಿದ್ದು, ರಾಜ್ಯದಲ್ಲಿ 3 ನೇ ಅಲೆ ಆರಂಭವಾಗದಂತೆ ತಡೆಯುವ ನಿಟ್ಟಿನಲ್ಲಿ ಜನರು ಈ ಜನತಾ ಕರ್ಫ್ಯೂ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಲೇ ಬೇಕಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಸೋಂಕು ವ್ಯಾಪಿಸುವ ಸಂಕೋಲೆಯನ್ನು ಮುರಿಯುವ ನಿಟ್ಟಿನಲ್ಲಿ ತಜ್ಞರು ನೀಡಿರುವ ಸಲಹೆಯ ಮೇರೆಗೆ 14 ದಿನಗಳ ಕಠಿಣ ಕ್ರಮವನ್ನು ಜಾರಿಗೆ ತರಲಾಗಿದೆ. ಈ ಕ್ರಮವನ್ನು ಸರಿಯಾಗಿ ಪಾಲನೆ ಮಾಡುವ ಮೂಲಕ ಜನರು ಕೊರೋನಾ ವಿರುದ್ಧ ಹೋರಾಟದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಬೇಕಿದೆ. ರಾಜ್ಯದಲ್ಲಿ 3 ನೇ ಅಲೆ ತಡೆಯುವ ನಿಟ್ಟಿನಲ್ಲಿ ದೊಡ್ಡ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳುವ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ದೈನಂದಿನ ಅಗತ್ಯತೆಗೆ ಸಂಬಂಧಿಸಿದಂತೆ ಸಮಯಾವಕಾಶವನ್ನು ಒದಗಿಸಲಾಗಿದ್ದು, ಆ ಸಮಯದಲ್ಲಿಯೇ ಜನರು ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆ. ಆದರೆ ಈ ಜನತಾ ಕರ್ಫ್ಯೂ ಸಂದರ್ಭದಲ್ಲಿ ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಸಾರ್ವಜನಿಕ ಸಾರಿಗೆ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ. ಜನರಿಗೆ ಕಷ್ಟವಾದರೂ ಕೊರೋನಾ ಚೈನ್ ಬ್ರೇಕ್ ಮಾಡುವ ನಿಟ್ಟಿನಲ್ಲಿ ಈ ಕ್ರಮ ಹೆಚ್ಚು ಅಗತ್ಯ ಎಂದು ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.