ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಇಂದು ರಾತ್ರಿ 9 ಗಂಟೆಯಿಂದ ಜಾರಿಯಾಗಲಿರುವ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ, ಬೆಂಗಳೂರಿನಿಂದ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಸರ್ಕಾರಿ ಸಾರಿಗೆ ವ್ಯವಸ್ಥೆ ಸಹ ಮಾಡಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರು ನಗರದಿಂದ ಹೊರ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಒಟ್ಟು 12000 ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಪ್ರಯಾಣಿಸುವಂತೆಯೂ ಸೂಚಿಸಿದ್ದಾರೆ. ಈ ಹೆಚ್ಚುವರಿ ಬಸ್ಸುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತವೆಯೇ ಎಂಬುದನ್ನು ಇದೇ ಸಂದರ್ಭದಲ್ಲಿ ಸಚಿವರು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸಹ ನಿಲ್ದಾಣದಲ್ಲಿನ ಪರಿಸ್ಥಿತಿಗಳ ಅವಲೋಕನ ನಡೆಸಿದರು. ರಾಜ್ಯಾದ್ಯಂತ ಇಂದಿನಿಂದ ತೊಡಗಿದಂತೆ ಕೊರೋನಾ ಜನತಾ ಕರ್ಫ್ಯೂ ಇರಲಿದ್ದು ಮುಂದಿನ 14 ದಿನಗಳ ವರೆಗೆ ಮುಂದುವರಿಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.