ಬೆಂಗಳೂರು: ಹನುಮಂತ ಸಂಜೀವಿನಿ ತಂದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೊರೋನಾ ಲಸಿಕೆ ನೀಡಿದೆ. ಈ ಅವಕಾಶವನ್ನು ಬಳಸಿಕೊಂಡು ಲಸಿಕೆ ಪಡೆಯುವುದು, ಸ್ವಯಂ ನಿಯಂತ್ರಣ ಹೇರಿಕೊಳ್ಳುವ ಮೂಲಕ ಕೊರೋನಾ ಮುಕ್ತರಾಗೋಣ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ನೆರೆಯ ಮಹಾರಾಷ್ಟ್ರದಲ್ಲಿಯೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿತ್ತು. ಅಲ್ಲಿ ಕರ್ಫ್ಯೂ ಜಾರಿಗೊಳಿಸಿದ ಬಳಿಕ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆ ವರದಿಯನ್ನಾಧರಿಸಿ ರಾಜ್ಯದಲ್ಲಿಯೂ ಕರ್ಫ್ಯೂ ಕ್ರಮ ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಜನತೆ ಅನಗತ್ಯ ಓಡಾಟ ನಡೆಸಬಾರದು. ಸೋಂಕಿನ ಲಕ್ಷಣಗಳು ಕಂಡುಬಂದವರು ಮನೆಯಿಂದ ಹೊರಬರಬಾರದು ಎಂದು ಮನವಿ ಮಾಡಿದ್ದಾರೆ.
ಕೊರೋನಾ ಸೋಂಕಿತರ ಅಂಕಿ ಅಂಶಗಳನ್ನು ಕುರಿತು ಸರ್ಕಾರ ಮಾಹಿತಿ ಮುಚ್ಚಿಡುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಅವರು, ಈ ಆರೋಪ ಸುಳ್ಳು. ಕೊರೋನಾ ನಿಯಂತ್ರಣ ವಿಚಾರದಲ್ಲಿ ರಾಜಕೀಯ ಸಲ್ಲದು ಎಂದು ಹೇಳಿದ್ದಾರೆ. ಜೊತೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು, ಸೌಕರ್ಯಗಳನ್ನು ಕ್ರೋಢೀಕರಿಸುವ ನಿಟ್ಟಿನಲ್ಲಿಯೂ ಕಾರ್ಯ ನಿರ್ವಹಿಸಲಾಗುತ್ತಿರುವುದಾಗಿ ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.