ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಲಾಕ್ಡನ್ ಹೇರಲಾಗಿದ್ದು, ಈ ಅವಧಿಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಾರ್ವಜನಿಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ 2 ವಾರಗಳ ಕಟ್ಟುನಿಟ್ಟಿನ ನಿರ್ಬಂಧ ಆರಂಭವಾಗಿದೆ. ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಸರ್ಕಾರದ ಜೊತೆ ಸಹಕರಿಸಲು ಸೂಚಿಸಿದ್ದಾರೆ. ಮನೆಯಲ್ಲೇ ಇರಿ. ತುರ್ತು ಅಗತ್ಯದ ಸನ್ನಿವೇಶದಲ್ಲಿ ಮಾತ್ರವೇ ಹೊರಬನ್ನಿ. ಎಲ್ಲರೂ ಒಂದಾಗಿ ಕೊರೋನಾ ಮಣಿಸೋಣ ಎಂದು ತಿಳಿಸಿದ್ದಾರೆ.
ಆತ್ಮೀಯ ನಾಗರಿಕ ಬಂಧುಗಳೇ, ಕೊರೋನಾ ಹರಡುವಿಕೆ ನಿಯಂತ್ರಣಕ್ಕಾಗಿ 2 ವಾರಗಳ ಕಟ್ಟುನಿಟ್ಟಿನ ನಿರ್ಬಂಧ ಪ್ರಾರಂಭವಾಗಿದೆ. ಎಲ್ಲರಲ್ಲೂ ನನ್ನ ಕಳಕಳಿಯ ಮನವಿಯೆಂದರೆ, ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ, ಮನೆಯಲ್ಲೇ ಇರಿ, ತುರ್ತು ಪರಿಸ್ಥಿತಿ ಇದ್ದಲ್ಲಿ ಮಾತ್ರ ಹೊರಗೆ ಬನ್ನಿ. ನಾವೆಲ್ಲರೂ ಒಂದಾಗಿ ಕೊರೋನಾ ಮಣಿಸೋಣ.
— B.S.Yediyurappa (@BSYBJP) April 28, 2021
ರಾಜ್ಯದಲ್ಲಿ ಕೊರೋನಾ ರಣಕೇಕೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 10 ರ ವರೆಗೆ 14 ದಿನಗಳ ಜನತಾ ಕರ್ಫ್ಯೂ ಹೇರಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆಲ್ಲಾ ವಹಿವಾಟುಗಳಿಗೆ ನಿರ್ಬಂಧ ಹೇರಲಾಗಿದೆ. ಸಾರಿಗೆ ಸಂಚಾರಕ್ಕೂ ಬ್ರೇಕ್ ಹಾಕಲಾಗಿದ್ದು, ಅಂತರಾಜ್ಯ, ಅಂತರ್ಜಿಲ್ಲಾ ಓಡಾಟಕ್ಕೂ ನಿರ್ಬಂಧ ಹೇರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.