ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿರುವ 14 ದಿನಗಳ ಲಾಕ್ಡೌನ್ ಅವಧಿಯಲ್ಲಿ ಕೃಷಿಕರಿಗೆ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗಬಾರದು ಎಂಬ ಕಾರಣದಿಂದ ಕೃಷಿ ಇಲಾಖೆ ಮತ್ತೆ ಅಗ್ರಿ ವಾರ್ ರೂಂ ಅನ್ನು ಆರಂಭ ಮಾಡಿದೆ.
ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಆರಂಭ ಮಾಡಲಾದಂತೆಯೇ ಈ ಬಾರಿಯೂ ಅಗ್ರಿ ವಾರ್ ರೂಂ ಆರಂಭ ಮಾಡಲಾಗಿದ್ದು, ಕೃಷಿಕರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸುವ ಕೆಲಸ ಮಾಡಲಿದೆ. ಇನ್ನೇನು ಕೆಲವೇ ಸಮಯದಲ್ಲಿ ಮುಂಗಾರು ಆರಂಭವಾಗಲಿದ್ದು ,ಈ ಸಂದರ್ಭದಲ್ಲಿ ಯಾವುದೇ ಇಲಾಖೆಯ ಅಧಿಕಾರಿಗಳಾಗಲಿ, ಕೃಷಿ ಪರಿಕರಗಳ ಸಾಗಾಟಕ್ಕೆ ರೈತರಿಗೆ ಸಮಸ್ಯೆಯಾಗುವಂತೆ ಮಾಡಬಾರದು ಎಂಬ ಉದ್ದೇಶದಿಂದ ಈ ವಾರ್ ರೂಂ ಕಾರ್ಯನಿರ್ವಹಿಸಲಿದೆ ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಕೃಷಿ ಕೇಂದ್ರ ಕಚೇರಿಯಲ್ಲಿ ಈ ವಾರ್ ರೂಂ ತೆರೆಯಲಾಗಿದೆ. 080- 22210237 ಅಥವಾ 080- 22212818 ಸಂಖ್ಯೆಗೆ ಕರೆ ಮಾಡುವ ಮೂಲಕ ಸಹಾಯವಾಣಿಯ ಅನುಕೂಲ ಪಡೆಯಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಎ. 28 ರಿಂದ ಬೆಳಿಗ್ಗೆ 8 ರಿಂದ ರಾತ್ರಿ 8 ರ ವರೆಗೆ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.