ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1 ರಿಂದ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಸಿಕೆ ಉತ್ಪಾದಕ ಕಂಪೆನಿಗೆ ಒಂದು ಕೋಟಿ ಲಸಿಕೆ ಪೂರೈಕೆಗೆ ಬೇಡಿಕೆ ಸಲ್ಲಿಸಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಹೇಳಿದ್ದಾರೆ.
ಈ ಲಸಿಕೆಗಳು ಪೂರೈಕೆಯಾದ ತಕ್ಷಣವೇ 18-44 ವರ್ಷಗಳವರೆಗಿನವರಿಗೆ ಲಸಿಕೆ ನೀಡುವ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
18 ರಿಂದ 44 ವರ್ಷಗಳೊಳಗಿನವರು ಕೊರೋನಾ ಲಸಿಕೆ ಪಡೆಯುವ ಸಂಬಂಧ Cowin ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ. ಆ ಬಳಿಕ ಲಸಿಕೆ ನೀಡುವ ದಿನಾಂಕ ಮತ್ತು ಸಮಯದ ಮಾಹಿತಿ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.