ಬೆಂಗಳೂರು: ಕೊರೋನಾ ಮಹಾಮಾರಿಯ ಎರಡನೇ ಅಲೆಯ ಕಾರಣಕ್ಕೆ ಇಡೀ ದೇಶವೇ ಕಂಗೆಟ್ಟು ಹೋಗಿದೆ. ಈ ಮಹಾಮಾರಿಯ ವಿರುದ್ಧ ಸರ್ಕಾರ, ಜನಸಾಮಾನ್ಯರು ಹೋರಾಟ ನಡೆಸುತ್ತಿದ್ದಾರೆ.
ಇಂತಹ ಕಠಿಣ ಪರಿಸ್ಥಿತಿಯಿಂದ ಜನಸಾಮಾನ್ಯರನ್ನು ಕಾಪಾಡಲು ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ನೀಡುವುದಾಗಿ ಸೂಚಿಸಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಸಹ ಚಾಲ್ತಿಯಲ್ಲಿದೆ.
ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೋನಾ. ಮೊದಲನೇ ಅಲೆಯ ಸಂದರ್ಭದಲ್ಲಿ ಅದನ್ನು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ಎರಡನೇ ಅಲೆ ನಮ್ಮ ಸಾಮರ್ಥ್ಯದ ಎಲ್ಲೆಯನ್ನು ಪರೀಕ್ಷೆ ಮಾಡುತ್ತಿದೆ. ಈ ಪರಿಸ್ಥಿತಿಯ ಸಮರ್ಥ ನಿರ್ವಹಣೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ವೆಂಟಿಲೇಟರ್, ಆಕ್ಸಿಜನ್, ಔಷಧ, ಲಸಿಕೆ, ಸಿಬ್ಬಂದಿ ಮೊದಲಾದ ವಿಚಾರಗಳನ್ನು ಏರಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಹಂತ ಹಂತವಾಗಿ 18 – 44 ವರ್ಷಗಳ ವರೆಗಿನ ಫಲಾನುಭವಿಗಳಿಗೆ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.