ಬೆಂಗಳೂರು: 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾಗಿ ಸಮಸ್ಯೆ ಅನುಭವಿಸಿರುವ ಶಿಕ್ಷಕರಿಗೆ ಕೌನ್ಸಲಿಂಗ್ ಮುಖಾಂತರ ಒಂದು ಬಾರಿಗೆ ವರ್ಗಾವಣೆಗೆ ಅವಕಾಶ ಮಾಡಿಕೊಡುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯ್ದೆ-2020 ತಿದ್ದುಪಡಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅಂಕಿತ ಹಾಕಿದ್ದಾರೆ.
ಕಳೆದ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಜ್ಯಪಾಲರೂ ಅಂಕಿತ ಹಾಕಿದ್ದಾರೆ. ಇದನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದ್ದು, ಶೀಘ್ರದಲ್ಲೇ 2020-21 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ವರ್ಗಾವಣೆಗೆ ಕಳೆದ ನವೆಂಬರ್ 11 ರಂದು ಅಧಿಸೂಚನೆ ಹೊರಡಿಸಲಾಗಿತ್ತು. 70 ಸಾವಿಕರ್ಕೂ ಅಧಿಕ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಶಿಕ್ಷೆಗೊಳಗಾದ ಶಿಕ್ಷಕರಿಗೆ ವಿಶೇಷ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಈ ತಿದ್ದುಪಡಿ ತರಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.