ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಲಾಗುವುದು ಎಂದು ಸಚಿವರು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕಳೆದ ಸೋಮವಾರ ಸಂಪುಟದಲ್ಲಿ ಶಿಕ್ಷಕರ ವರ್ಗಾವಣೆ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು – ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ತಿದ್ದುಪಡಿಗೆ ಅನುಮೋದನೆ ದೊರೆತಿತ್ತು. ಈ ಕಾಯ್ದೆಗೆ ಇದೀಗ ರಾಜ್ಯಪಾಲರೂ ಅಂಕಿತ ಹಾಕಿದ್ದಾರೆ. ಈ ಸಂಬಂಧ ಅಧಿಕೃತ ರಾಜ್ಯಪತ್ರದಲ್ಲಿ ಆಧ್ಯಾದೇಶ ಹೊರಡಿಸಲಾಗುವುದಾಗಿಯೂ ಅವರು ಹೇಳಿದ್ದಾರೆ.
2019 – 20 ನೇ ಸಾಲಿನಲ್ಲಿ ಕಡ್ಡಾಯ, ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಸಂಬಂಧಿಸಿದಂತೆ ಒಂದು ಬಾರಿ ವಿಶೇಷ ಅವಕಾಶ ಜಾರಿಯಲ್ಲಿಡಲಾಗುವುದು. ಅವರು ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಪ್ರದೇಶದಲ್ಲಿ ಲಭ್ಯವಿರುವ ಹುದ್ದೆಗಳಿಗೆ ಮೊದಲ ಆದ್ಯತೆಯ ವರ್ಗಾವಣೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.