ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಪ್ರತಿ ಐವರಲ್ಲಿ ಒಬ್ಬರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಜೂನ್ ಮೊದಲ ವಾರದಲ್ಲಿ ಸೋಂಕು ಇಳಿಮುಖವಾಗುವ ಸಾಧ್ಯತೆ ಇದ್ದು, ವರ್ಷಾಂತ್ಯದ ವರೆಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲನೆ ಮಾಡುವುದು ಅತ್ಯಗತ್ಯ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ , ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ ಸಿ ಎನ್ ಮಂಜುನಾಥ್ ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 2 ಕೋಟಿ ಜನರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರಿಂದ ಕ್ಂಚ ಮಟ್ಟಿಗೆ ಪಾರಾಗಲು ಫಲಾನುಭವಿಗಳು ಲಸಿಕೆ ಪಡೆಯುವಂತೆಯೂ ಅವರು ಸೂಚಿಸಿದ್ದಾರೆ. ಅಲ್ಲದೆ ಜ್ವರ, ಕೆಮ್ಮು ಸೇರಿದಂತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ವಹಿಸದೆ ಪರೀಕ್ಷಿಸಿಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಆರೈಕೆ ಕೇಂದ್ರಗಳನ್ನು ಹೆಚ್ಚೆಚ್ಚು ಸ್ಥಾಪಿಸಬೇಕಾಗಿದೆ. ಆ ಮೂಲಕ ಕೊರೋನಾ ನಿಯಂತ್ರಣ, ಚಿಕಿತ್ಸೆಗೆ ಅಗತ್ಯ ಕ್ರಮ ವಹಿಸಬೇಕಾಗಿದೆ ಎಂದು ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.