ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯ ಆಕ್ಸಿಜನ್ ಕೊರತೆ ನಿವಾರಿಸಲು ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳ ಓಡಾಟಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಸರ್ಕಾರ ರೈಲ್ವೆ ಮಂಡಳಿಗೆ ಮನವಿ ಸಲ್ಲಿಸಿದೆ. ಇದಕ್ಕೆ ರೈಲ್ವೆಯಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ವೈಟ್ಫೀಲ್ಡ್ ಅಥವಾ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ನಡುವೆ ಆಕ್ಸಿಜನ್ ರೈಲು ಓಡಾಟಕ್ಕೆ ಆದ್ಯತೆ ನೀಡುವಂತೆ ಈ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಗ್ರೀನ್ ಚಾನೆಲ್ಗಳ ಮೂಲಕ ಅಗತ್ಯ ಸಮಯಕ್ಕೆ ಸರಿಯಾಗಿ ವಿಶೇಷ ಆಕ್ಸಿಜನ್ ರೈಲುಗಳ ಓಡಾಟದ ಅಗತ್ಯತೆ ಇರುತ್ತದೆ. ಈ ರೈಲುಗಳ ಓಡಾಟದ ಮೇಲೆ ನಿಗಾ ವಹಿಸಲು ರೈಲ್ವೆ ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕಾಗುತ್ತದೆ. ಇದಕ್ಕೆ ರೈಲ್ವೆ ಇಲಾಖೆ ಸಕಾರಾತ್ಮಕ ಸ್ಪಂದನೆ ನೀಡಿದೆ.
ಬೆಂಗಳೂರು ರೈಲ್ವೆ ವಿಭಾಗದ ಕೊರೋನಾ ಕೇರ್ ಸೆಂಟರ್ಗಳಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿಲ್ಲ. ಮುಂದೆಯೂ ಕೊರತೆಯಾಗಬಾರದು ಎಂಬ ಉದ್ದೇಶದಿಂದ 2 ಸಾವಿರ ಲೀ. ಸಾಮರ್ಥ್ಯದ ಲಿಕ್ವಿಡ್ ಆಕ್ಸಿಜನ್ ಪ್ರಾಂಟ್ ಸ್ಥಾಪಿಸುವುದಾಗಿ ರೈಲ್ವೆ ವಿಭಾಗೀಯ ಪ್ರಕಟಣೆ ತಿಳಿಸಿದೆ. ಜೊತೆಗೆ ಬಹು ಹಂತದ ಪೂರೈಕೆ ಮೂಲಕ ಆಕ್ಸಿಜನ್ ಖರೀದಿಗೂ ಯೋಜನೆ ಹಾಕಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.