ಬೆಂಗಳೂರು: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಕಾರ್ಯಪಡೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪುನಾರಚನೆ ಮಾಡಿದ್ದು, ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಇದರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಈ ವರೆಗೂ ಲೋಕೋಪಯೋಗಿ ಸಚಿವ ಮತ್ತು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೋವಿಡ್ ಕಾರ್ಯಪಡೆಯ ಅಧ್ಯಕ್ಷರಾಗಿದ್ದರು.
ಸದ್ಯ ಪುನಾರಚನೆಯಾಗಿರುವ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ ಅಶ್ವತ್ಥ್ ನಾರಾಯಣ್, ಸದಸ್ಯರಾಗಿ ಸಚಿವ ಸುರೇಶ್ ಕುಮಾರ್, ಸಿ ಸಿ ಪಾಟೀಲ್, ಡಾ ಕೆ ಸುಧಾಕರ್ ಇದ್ದಾರೆ. ರಾಜ್ಯದ ಕೊರೋನಾ ಪರಿಸ್ಥಿತಿ ಉಸ್ತುವಾರಿ ಜೊತೆಗೆ ಉನ್ನತ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವೂ ಈ ಕಾರ್ಯಪಡೆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.