ವಾಷಿಂಗ್ಟನ್: ಭಾರತದಲ್ಲಿ ಕೊರೋನಾ ರೋಗಿಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಭಾರತೀಯ ಮೂಲದ ಅಮೆರಿಕನ್ ಸಮುದಾಯಕ್ಕೆ ಸೇರಿದ ಒಂದೇ ಕುಟುಂಬದ ತ್ರಿವಳಿಗಳು 2.06 ಕೋಟಿ ರೂ. ಸಂಗ್ರಹಿಸಿದ್ದಾರೆ.
ಲಿಟಲ್ ಮೆಂಟರ್ಸ್ ಸಂಘಟನೆಯ ಸ್ಥಾಪಕರಾಗಿರುವ 15 ವರ್ಷ ವಯಸ್ಸಿನ ಗಿಯಾ, ಕರೀನಾ, ಅರ್ಮನ್ ಎಂಬ ಮೂವರು, ತಮ್ಮ ಶಾಲೆಯಲ್ಲಿನ ಸ್ನೇಹಿತರು, ತಮ್ಮ ಕುಟುಂಬದವರ ಸಹಾಯದಿಂದ ಈ ಧನ ಸಂಗ್ರಹ ಮಾಡಿದ್ದಾರೆ. ಈ ಹಣವನ್ನು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿರುವ ಆಸ್ಪತ್ರೆ, ರೋಗಿಗಳಿಗೆ ಆಮ್ಲಜನಕ ಪೂರೈಕೆ ಪರಿಕರ, ವೆಂಟಿಲೇಟರ್ಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಬಳಕೆ ಮಾಡಲಿದ್ದಾರೆ.
ನಿಮಗೆ ಆ ವೈದ್ಯಕೀಯ ಸಲಕರಣೆಗಳ ಅಗತ್ಯ ಇರದಾಗ, ಮತ್ತೆ ನಮಗೆ ಅದನ್ನು ಹಿಂದಿರುಗಿಸಬೇಕು ಎಂಬ ವಿನಂತಿಯ ಜೊತೆಗೆ ಅವನ್ನು ರೋಗಿಗಳಿಗೆ ನೀಡಲಾಗುತ್ತಿದೆ. ಈ ಸಲಕರಣೆಗಳು ಅತಿ ಮಹತ್ವದ್ದಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಸಹ ಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಇವರು ಭಾರತದ ಪ್ರಮುಖ ನಗರಗಳಲ್ಲಿ ವಿತರಣೆ ಕೇಂದ್ರ ಗಳನ್ನು ತೆರೆಯುವುದಕ್ಕೆ ಯೋಜನೆ ರೂಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.