News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಮ್ಲಜನಕ ಸ್ಥಾವರ ಸ್ಥಾಪಿಸಲು ಸರ್ಕಾರ 581 ತಾಣಗಳನ್ನು ಗುರುತಿಸಿದೆ: ಗಡ್ಕರಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಹೆಚ್ಚುವರಿ ಪ್ರೆಶರ್ ಸ್ವಿಂಗ್ ಅಬ್ಸಾರ್ಪ್ಷನ್ (ಪಿಎಸ್ಎ) ವೈದ್ಯಕೀಯ ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಲು ಸರ್ಕಾರವು 581 ತಾಣಗಳನ್ನು ಗುರುತಿಸಿದೆ.

ಸರಣಿ ಟ್ವೀಟ್‌ಗಳಲ್ಲಿ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ಸ್ಥಾವರಗಳಿಗೆ ನಾಗರಿಕ ಮತ್ತು ವಿದ್ಯುತ್ ಕಾರ್ಯಗಳನ್ನು ನಿರ್ವಹಿಸುವ ನೋಡಲ್ ಏಜೆನ್ಸಿಯಾಗಿದ್ದು, ಅವುಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಿದೆ.

ಅಗತ್ಯವಿರುವ ರೋಗಿಗಳಿಗೆ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಎಂಜಿನಿಯರ್‌ಗಳು ವೈದ್ಯರೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರತಿಯೊಬ್ಬ ಭಾರತೀಯರ ಜೀವ ಉಳಿಸಲು ಎನ್‌ಎಚ್‌ಎಐ ದಾಖಲೆ ವೇಗದಲ್ಲಿ ಮೂಲಸೌಕರ್ಯಗಳನ್ನು ನಿರ್ಮಿಸಲಿದೆ ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top