ಬೆಂಗಳೂರು: ಕೊರೋನಾ ಎರಡನೇ ಅಲೆಯ ನಡುವೆಯೂ ಕಾರ್ಯೋನ್ಮುಖರಾಗಿರುವ ಪತ್ರಕರ್ತರನ್ನು ಕೊರೋನಾ ಮುಂಚೂಣಿ ಕಾರ್ಯಕರ್ತರು ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ.
ಕೊರೋನಾ ತಗುಲಿ ಅದೆಷ್ಟೋ ಪತ್ರಕರ್ತರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನು ಕೊರೋನಾ ಸೋಂಕಿನಿಂದ ರಕ್ಷಿಸುವ ಸಲುವಾಗಿ ಸುರಕ್ಷತೆಯ ದೃಷ್ಟಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
ಪತ್ರಕರ್ತರು ಹಗಲು, ರಾತ್ರಿಯೆನ್ನದೆ ಕಾರ್ಯನಿರ್ವಹಿಸುತ್ತಿದ್ದಃ, ಅವರಿಗೆ ಸೋಂಕು ತಗುಲುವ ಅಪಾಯ ಹೆಚ್ಚು. ಈ ಹಿನ್ನೆಲೆಯಲ್ಲಿ ಆರಂಭದ ಹಂತದಲ್ಲೇ ಪತ್ರಕರ್ತರಿಗೆ ಕೊರೋನಾ ಲಸಿಕೆ ನೀಡುವ ಸಾಧ್ಯತೆ ಇದೆ.
ಪತ್ರಕರ್ತರು ಮತ್ತು ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೀಡಲು ಕೂಡಲೇ ಸೂಕ್ತ ಆದೇಶ ಹೊರಡಿಸಿ ಅನುಷ್ಠಾನಗೊಳಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ @BSYBJP ರವರು ಸೂಚಿಸಿದ್ದಾರೆ.
— CM of Karnataka (@CMofKarnataka) May 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.