ವಾಷಿಂಗ್ಟನ್: ಕೊರೋನಾ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಜಾರಿಯನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವಂತೆ ಭಾರತ, ದಕ್ಷಿಣ ಆಫ್ರಿಕಾ ಮನವಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೆಂಬಲಿಸಿದ್ದು, ಈ ಕ್ರಮವನ್ನು ಭಾರತ ಶ್ಲಾಘಿಸಿದೆ.
ಟಿಆರ್ಐಪಿಎಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳ ಜಾರಿಗೆ ಕಾಲಮಿತಿಯ ತಡೆ ನೀಡುವಂತೆ ವಿಶ್ವ ವ್ಯಾಪಾರ ಸಂಘಟನೆಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ಮನವಿ ಸಲ್ಲಿಸಿದ್ದವು. ದೇಶದ ಈ ನಡೆಗೆ ಹಲವು ರಾಷ್ಟ್ರಗಳು ಬೆಂಬಲ ಸೂಚಿಸಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿನ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಮತ್ತು ದಕ್ಷಿಣ ಆಫ್ರಿಕಾದ ರಾಜತಾಂತ್ರಿಕರು ಅಮೆರಿಕದ ಅಧಿಕಾರಿಗಳನ್ನು ಕೆಲ ದಿನಗಳಿಂದ ಭೇಟಿ ಮಾಡುತ್ತಿದ್ದರು.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಂಧು, ಅಮೆರಿಕದ ಈ ಬೆಂಬಲವನ್ನು ಭಾರತ ಶ್ಲಾಘಿಸುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.