ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ 168 ಸಾಮಾನ್ಯ ಹಾಸಿಗೆಗಳನ್ನು ಆಕ್ಸಿಜನ್ಯುಕ್ತ ಹಾಸಿಗೆಗಳಾಗಿ ಮಾರ್ಪಾಡು ಮಾಡಲು ಸೂಚಿಸಲಾಗಿದೆ.
ಪ್ರಸ್ತುತ ಕೊರೋನಾ ಆರೈಕೆ ಕೇಂದ್ರಗಳಲ್ಲಿ 2 ಸಾವಿರ ಹಾಸಿಗೆಗಳು ಲಭ್ಯವಿದ್ದು, ಇನ್ನೂ ಹೆಚ್ಚಿನ ಆಮ್ಲಜನಕಯುಕ್ತ ಹಾಸಿಗೆಗಳನ್ನು ಉಪಯೋಗಕ್ಕೆ ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಕೊರೋನಾ ಸೋಂಕು ಏರಿಕೆಯಾಗುತ್ತಲೇ ಇದ್ದು ಈ ಹಿನ್ನೆಲೆಯಲ್ಲಿ ಕೊರೋನಾ ಹಾಸಿಗೆಗಳ ಪೈಕಿ 50% ಹಾಸಿಗೆಗಳನ್ನು ಆಕ್ಸಿಜನ್ ಹಾಸಿಗೆಗಳಾಗಿ ಪರಿವರ್ತನೆ ಮಾಡಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ಬಿಬಿಎಂಪಿ ಹೇಳಿದೆ. ಈಗಿರುವ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಬಿಬಿಎಂಪಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.