ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಸೋಂಕು ನಿಯಂತ್ರಣ ಸಿಬ್ಬಂದಿಗಳನ್ನು. ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿದೆ.
ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಲ್ಯಾಬ್ ಟೆಕ್ನಿಷಿಯನ್, ಟೈಪಿಸ್ಟ್, ಗ್ರೂಪ್ ಡಿ ಹುದ್ದೆಗಳಿಗೆ 30 – 9 – 2021 ರ ವರೆಗೆ ಅನ್ವಯವಾಗುವಂತೆ ಗುತ್ತಿಗೆ/ ಹೊರಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡುವಂತೆ ಸರ್ಕಾರದ ಅಪರ ಕಾರ್ಯದರ್ಶಿ ಆದೇಶಿಸಿದ್ದಾರೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಂತದಲ್ಲೇ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕೊರೋನಾ ಪ್ರಕರಣಗಳ ನಿರ್ವಹಣೆಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿಯನ್ನು ಈ ಹಿಂದೆಯೇ ಸೂಚಿಸಿರುವ ಷರತ್ತು, ನಿಬಂಧನೆಗಳ ಅನ್ವಯ 30 – 9 -2021 ರ ವರೆಗೆ ವಿಸ್ತರಿಸಿರುವುದಾಗಿ ಈ ಆದೇಶದಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.