ಬೆಂಗಳೂರು: ರಾಜ್ಯದ 10 ಜಿಲ್ಲಾಸ್ಪತ್ರೆಗಳು ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ರಾಜ್ಯ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.
ಕೊರೋನಾ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಸಂಗತಿಯನ್ನು ತುರ್ತು ಅಗತ್ಯತೆ ಎಂದು ಪರಿಗಣಿಸಿ ತಕ್ಷಣವೇ ಕ್ರಮ ಜರುಗಿಸಬೇಕು ಎಂದು ಇಲಾಖೆ ಸೂಚಿಸಿದೆ.
ಆಯ್ಕೆ ಮಾಡಲಾದ ಎಲ್ಲಾ 40 ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಸಿವಿಲ್ ಹಾಗೂ ವಿದ್ಯುತ್ ಕಾಮಗಾರಿಗಳನ್ನು ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನುರಿತ, ಅರ್ಹ ಗುತ್ತಿಗೆದಾರರಿಂದ ಅನುಷ್ಠಾನ ಮಾಡುವಂತೆ ಇಲಾಖೆ ಸೂಚಿಸಿದೆ. 10 ಜಿಲ್ಲಾಸ್ಪತ್ರೆಗಳಲ್ಲಿ 500 ಎಲ್ಪಿಎಂ ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ 390 ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗುತ್ತದೆ.
ಈ ಪಟ್ಟಿಯಲ್ಲಿ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಹಾಸನ, ಶಿವಮೊಗ್ಗ ಸೇರಿದಂತೆ ಇಚರ ಪ್ರಮುಖ ಆಸ್ಪತ್ರೆಗಳು ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.