ಬಳ್ಳಾರಿ: ನಗರದಲ್ಲಿ ಮುಂದಿನ 15 ದಿನಗಳಲ್ಲಿ ಜಿಂದಾಲ್ ಕಾರ್ಖಾನೆ ನೇತೃತ್ವದ 1 ಸಾವಿರ ಆಕ್ಸಿಜನ್ ಬೆಡ್ ಸೌಲಭ್ಯ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. 265 ಹಾಸಿಗೆಗಳುಳ್ಳ ಒಂದು ಘಟಕ ಇನ್ನೆರಡು ದಿನಗಳಲ್ಲಿ ಕಾರ್ಯಾಚರಿಸಲಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಆಕ್ಸಿಜನ್ಗಾಗಿ ಜನರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಂದಾಲ್ ಆರಂಭಿಸಲಿರುವ ಈ ಆಸ್ಪತ್ರೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ, ರಾಯಚೂರು, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳಿಗೂ ಅನುಕೂಲ ಕಲ್ಪಿಸಲಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಬಳ್ಳಾರಿ – ವಿಜಯನಗರ ಜಿಲ್ಲೆಗಳ ಜನರು ಹಾಸಿಗೆ ಸಿಗುತ್ತಿಲ್ಲ ಎಂದು ಆತಂಕ ಪಡಬೇಕಾಗಿಲ್ಲ. ಈ ಆಸ್ಪತ್ರೆ ಆರಂಭದಿಂದ ಇದು ಹೆಚ್ಚಿನ ಸೋಂಕಿತರಿಗೆ ಚಿಕಿತ್ಸೆ ನೀಡಲು ನೆರವಾಗುತ್ತದೆ. ಜಿಲ್ಲೆಯ ಜನರ ಆರೋಗ್ಯ ಕಾಪಾಡುವಲ್ಲಿಯೂ ಜಿಂದಾಲ್ ಸಂಸ್ಥೆಯ ಈ ಕ್ರಮ ಹೆಚ್ಚು ಅನುಕೂಲಕಾರಿಯೇ ಹೌದು ಎಂದು ಶ್ರೀರಾಮುಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.