ಬಳ್ಳಾರಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವ ಮೂಲಕ ಜನರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
ಇದಕ್ಕಾಗಿ ನಗರದ 39 ವಾರ್ಡ್ ಗಳಿಗೆ ತಲಾ ಓರ್ವ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದ್ದು, ಪ್ರತಿ ತಂಡದಲ್ಲಿ ವೈದ್ಯರು, ದಾದಿಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ.
ಈ ತಂಡ ಮನೆಯಲ್ಲಿರುವ ಪ್ರತಿಯೊಬ್ಬರನ್ನು ತಪಾಸಣೆ ನಡೆಸಿ, ಅವರಲ್ಲಿ ಯಾರಿಗಾದರೂ ರೋಗ ಲಕ್ಷಣ ಕಂಡು ಬಂದರೆ ಹೋಂ ಕ್ವಾರಂಟೈನ್ ಅಥವಾ ಆಸ್ಪತ್ರೆಗೆ ದಾಖಲಿಸಬೇಕೆ ಎಂಬುದರ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಕೊರೋನಾ ಸೋಂಕಿನಿಂದ ಗುಣಮುಖರಾದ ಸುರೇಶ್ ಗೌಡ ಮಾತನಾಡಿ, ತಮಗೆ ಕೊರೋನಾ ಸೋಂಕು ತಗುಲಿರುವುದು ತಿಳಿದು ಬಂದ ತಕ್ಷಣ ಜಿಲ್ಲಾಡಳಿತ ನೀಡಿದ ನಿರ್ದೇಶನದಂತೆ ಸರಿಯಾದ ಚಿಕಿತ್ಸೆ ಪಡೆದು ಸದ್ಯ ಗುಣಮುಖರಾಗಿದ್ದೇನೆ ಎಂದಿದ್ದಾರೆ. ಹಾಗೆಯೇ ಸ್ಥಳೀಯ ನಿವಾಸಿಯೊಬ್ಬರು, ಜಿಲ್ಲಾಡಳಿತ ಮನೆ ಮನೆಗೆ ತೆರಳಿ ಸೋಂಕು ಕಂಡು ಬಂದ ತಕ್ಷಣ ಮುಂಜಾಗ್ರತೆ ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದ್ದಾರೆ.
ಈ ಕ್ರಮದ ಬಗ್ಗೆ ಜಿಲ್ಲಾ ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ ಮಾತನಾಡಿದ್ದು, ಮನೆಯಲ್ಲಿರುವ ಎಲ್ಲರನ್ನು ತಪಾಸಣೆ ನಡೆಸಿ ಸೋಂಕಿತರು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.