ನವದೆಹಲಿ: ದೇಶದಾದ್ಯಂತ ಇದುವರೆಗೂ ಸುಮಾರು 17 ಕೋಟಿ ಡೋಸ್ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ಸಂಬಂಧ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, 18 ರಿಂದ 44 ವರ್ಷಗಳೊಳಗಿನ ಜನರಲ್ಲಿ 30 ರಾಜ್ಯ, ಕೇಂದ್ರಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ 2,43,958 ಜನರಿಗೆ ಮೊದಲ ಡೋಸ್ ನೀಡಲಾಗಿದೆ. ಆ ಮೂಲಕ ಈ ವರೆಗೆ ದೇಶದಲ್ಲಿ 17,01,53,432 ಜನರಿಗೆ ಕೊರೋನಾ ಲಸಿಕೆ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.
ಸುಮಾರು 95,46,871 ಮಂದಿ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಸುಮಾರು 64,71,090 ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 1,39,71,341 ಮುನ್ನೆಲೆ ಕಾರ್ಯಕರ್ತರು ಮೊದಲ ಡೋಸ್ ಮತ್ತು 77,54,283 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.
45 – 60 ವರ್ಷದ ವರೆಗಿನ 5,51,74,561 ಜನರು ಮೊದಲ ಡೋಸ್ ಮತ್ತು 65,55,714 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 60 ವರ್ಷ ಮೇಲ್ಪಟ್ಟ 5,36,72,259 ಮಂದಿ ಮೊದಲ ಡೋಸ್ ಮತ್ತು 1,49,77,918 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿರುವುದಾಗಿ ಈ ಅಂಕಿ ಅಂಶಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.