ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ 250 ಯೂನಿಟ್ಗಳ ಆಕ್ಸಿಜನ್ ಕಾನ್ಸನ್ಟ್ರೇಟರ್ ಬ್ಯಾಂಕ್ಗೆ ಸಂಸದ ತೇಜಸ್ವಿ ಸೂರ್ಯ ಚಾಲನೆ ನೀಡಿದ್ದಾರೆ.
ಬೆಂಗಳೂರು ದಕ್ಷಿಣ ಸಂಸದರ ಕಚೇರಿ 1 ಸಾವಿರಕ್ಕೂ ಅಧಿಕ ಆಮ್ಲಜನಕ ಕಾನ್ಸನ್ಟ್ರೇಟರ್ಗಳನ್ನು ನಗರದ ನಾಗರಿಕರ ಸೇವೆಗೆ ಒದಗಿಸಲಾಗಿದ್ದು, ಈಗಾಗಲೇ 100 ಮಂದಿ ಸೋಂಕಿತರು ಮತ್ತು 150 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾದ ರೋಗಿಗಳ ಮನೆಗೆ ಈ ಸೇವೆಯನ್ನು ಒದಗಿಸಿದೆ.
ಕೊರೋನಾ ಸೋಂಕಿತರ ಸಣ್ಣ ಪ್ರಮಾಣದ ಗುಣಲಕ್ಷಣಗಳನ್ನು ಹೊಂದಿರುವ ಹಲವು ಸೋಂಕಿತರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಡ್ ಹಂಚಿಕೆಗೂ ಮುನ್ನವೇ ಆಕ್ಸಿಜನ್ ಒದಗಿಸುವ ಮೂಲಕ ರೋಗಿಗಳಿಗೆ ಅನುಕೂಲ ಒದಗಿಸಲು ಈ ಕ್ರಮಕ್ಕೆ ಮುಂದಾಗಲಾಗಿದೆ. ಈ ವ್ಯವಸ್ಥೆಯಲ್ಲಿ ಮನೆಯಲ್ಲಿದ್ದುಕೊಂಡೇ ರೋಗಿಗಳಿಗೆ ಚಿಕಿತ್ಸೆ ನೀಡಬಹುದಾಗಿದೆ.
ಈ ಸೇವೆಯನ್ನು ಪಡೆದುಕೊಳ್ಳಲು ಸೋಂಕಿತರು ಅಥವಾ ಅವರ ಕುಟುಂಬ ವರ್ಗ 080 – 6191 4960 ಗೆ ಕರೆ ಮಾಡಬಹುದಾಗಿದೆ. ಆ ಬಳಿಕ ಕೊರೋನಾ ಸೋಂಕಿತರ ಸೇವೆಯಲ್ಲಿ ತೊಡಗಿರುವ ಕಾರ್ಯಕರ್ತರು ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೇರವಾಗಿ ಮನೆಗೇ ತಲುಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Launched Bengaluru South #MPOxyBank today for doorstep delivery of O2 concentrators for recovery of COVID & post-COVID patients
It will help stabilize patients with SPO2 level of 85-92 until patient receives hospital bed & post discharge
Call 080 6191 4960 for help pic.twitter.com/4e7ffx2aD8
— Tejasvi Surya (@Tejasvi_Surya) May 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.