ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ನಿವಾರಣೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಸಭೆ ನಡೆಸಿದರು.
ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವುದು, ಸೋಂಕಿನಿಂದ ಮೃತಪಟ್ಟವರ ಶವ ಸಾಗಾಟ ಸೇರಿದಂತೆ ಇನ್ನಿತರ ಕೆಲಸಗಳಿಗೆ ಖಾಸಗಿ ಆಂಬುಲೆನ್ಸ್ಗಳನ್ನು ಬಳಕೆ ಮಾಡುವ ಸಂಬಂಧ ಈ ಸಭೆ ನಡೆಸಲಾಯಿತು. ಜೊತೆಗೆ ಅವುಗಳನ್ನು ಬಳಕೆ ಮಾಡಲು ಅದಕ್ಕೆ ಸೂಕ್ತ ದರ ನಿಗದಿ ಮಾಡುವುದು ಸೇರಿದಂತೆ ಇನ್ನಿತರ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.
ಕೊರೋನಾ ಸೋಂಕಿನ ಭೀಕರತೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ಅಗತ್ಯ ಸಮಯದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಖಾಸಗಿ ಆಂಬ್ಯುಲೆನ್ಸ್ಗಳ ಬಳಕೆಯ ಬಗ್ಗೆ ಚಿಂತನೆ ನಡೆಸಿದೆ.
ಖಾಸಗಿ ಆಂಬ್ಯುಲೆನ್ಸ್ ಸೇವೆಗಳಿಗೆ ದರ ನಿಗದಿಗೊಳಿಸುವ ಕುರಿತಂತೆ ಚರ್ಚಿಸಲು ಸಾರಿಗೆ ಸಚಿವರೂ ಆಗಿರುವ ಮಾನ್ಯ ಉಪ ಮುಖ್ಯಮಂತ್ರಿ ಶ್ರೀ ಲಕ್ಷ್ಮಣ್ ಸವದಿ ಅವರೊಂದಿಗೆ ಸಮಾಲೋಚನೆ ನಡೆಸಲಾಯಿತು.
Met Deputy CM and Transport Minister Shri @LaxmanSavadi to discuss about capping the price of private ambulance services. pic.twitter.com/VH54m5rQwz
— Dr Sudhakar K (@DrSudhakar_) May 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.