ಹುಬ್ಬಳ್ಳಿ: ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ನೈಋತ್ಯ ರೈಲ್ವೆ ವಲಯ ತನ್ನ ಮೂರು ವಿಭಾಗಗಳಲ್ಲಿ 265 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ.
ಬೆಂಗಳೂರು ವಿಭಾಗದಲ್ಲಿ 73, ಮೈಸೂರು ವಿಭಾಗದಲ್ಲಿ 95, ಹುಬ್ಬಳ್ಳಿ ವಿಭಾಗದಲ್ಲಿ 90 ಭೋಗಿಗಳನ್ನು ಸಾರ್ವಜನಿಕರ ಸೇವೆಗಾಗಿ ಮೀಸಲಿರಿಸಿದೆ. ಪ್ರತಿ ಭೋಗಿಯಲ್ಲಿ ಒಬ್ಬರಿಗಾಗಿ ಎಂಟು ಹಾಸಿಗೆಗಳು, ಇಬ್ಬರಿಗಾಗಿ 16 ಹಾಸಿಗೆಗಳ ವ್ಯವಸ್ಥೆ ಸಹ ಮಾಡಲಾಗಿದೆ. ಮನೆಯಲ್ಲಿ ಐಸೋಲೇಷನ್ ಪ್ರಕ್ರಿಯೆಗೆ ಒಳಪಡಲು ಅಸಾಧ್ಯವಾದವರು ಈ ಸೇವೆಯನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಕಳೆದ ವರ್ಷ ಕೊರೋನಾ ಒಂದನೇ ಅಲೆಯ ಸಂದರ್ಭದಲ್ಲಿಯೂ ವಿಭಾಗ 320 ಭೋಗಿಗಳನ್ನು ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತನೆ ಮಾಡಿತ್ತು. ಇದೀಗ ಎರಡನೇ ಅಲೆಯ ಸಂದರ್ಭದಲ್ಲಿಯೂ ಸೋಂಕಿತರಿಗೆ ಪೂರಕ ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ನೈಋತ್ಯ ರೈಲ್ವೆ ಈ ವ್ಯವಸ್ಥೆ ಆರಂಭಿಸಿರುವುದಾಗಿ ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.