ಬೆಂಗಳೂರು: ಕೊರೋನಾ ಎರಡನೇ ಅಲೆಗೆ ರಾಜ್ಯ ತತ್ತರಿಸಿದೆ. ಈ ನಡುವೆಯೇ ಮೂರನೇ ಅಲೆಯ ಎಚ್ಚರಿಕೆಯನ್ನು ತಜ್ಞರು ನೀಡಿದ್ದು, ಈ ಹಿನ್ನೆಲೆಯಲ್ಲಿ ತಕ್ಷಣವೇ ಅದನ್ನು ನಿಭಾಯಿಸಲು ಕಾರ್ಯಪಡೆ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೂರನೇ ಅಲೆಯ ಮುನ್ನೆಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಜೊತೆಗೆ ಅದರ ಸಮರ್ಥ ನಿವಾರಣೆಗೂ ಅಗತ್ಯ ಕಾರ್ಯಸೂಚಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಬೇಕಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿದ ಲಾಕ್ಡನ್ ಕ್ರಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ. ಅನಗತ್ಯ ಓಡಾಡುವುದನ್ನು ನಿಲ್ಲಿಸಿ ಅವರವರ ಆರೋಗ್ಯ ಕಾಳಜಿಯನ್ನು ಅವರವರೇ ವಹಿಸಬೇಕಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಕೊರೋನಾ ಚಿಕಿತ್ಸೆಗೆ ಅಗತ್ಯ ಔಷಧ, ಹಾಸಿಗೆಗಳನ್ನು ಒದಗಿಸಲು ಪೂರಕ ವ್ಯವಸ್ಥೆ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ.
ಕೊರೋನಾ ಮೂರನೇ ಅಲೆಯಿಂದ ಯುವ ಪೀಳಿಗೆಗೆ ಹೆಚ್ಚು ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ನುರಿತ ತಜ್ಞರು ತಿಳಿಸಿದ್ದಾರೆ. ಈ ವರ್ಷ ಜುಲೈ, ಆಗಸ್ಟ್ ತಿಂಗಳಲ್ಲಿ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲು ಸರ್ವಸನ್ನದ್ಧರಾಗಿರಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.