ಬೆಂಗಳೂರು: ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಾಗದೆ, ಆಮ್ಲಜನಕವೂ ಸಿಗದೆ ಪರದಾಡುವ ರೋಗಿಗಳಿಗೆ ಅಗತ್ಯ ಆಕ್ಸಿಜನ್ ನೆರವು ನೀಡುವ ಹಿನ್ನೆಲೆಯಲ್ಲಿ ಚೆನ್ನೈ ಮಾದರಿಯಲ್ಲಿ ಮೊಬೈಲ್ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಚೆನ್ನೈನಲ್ಲಿ ಒಂದು ಖಾಸಗಿ ಸಂಸ್ಥೆ ಮೊಬೈಲ್ ಆಕ್ಸಿಜನ್ ಪೂರೈಕೆ ಕೆಲಸ ಮಾಡುತ್ತಿದೆ. ಬಸ್ಸುಗಳಲ್ಲಿ ತುರ್ತು ಸಂದರ್ಭಗಳಲ್ಲಿ ಆಕ್ಸಿಜನ್ ನೀಡಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅದೇ ರೀತಿಯ ವ್ಯವಸ್ಥೆಗಳನ್ನು ರೂಪಿಸುವ ಬಗ್ಗೆ ಸರ್ಕಾರ ಅಗತ್ಯ ಚಿಂತನೆಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.
ಅಗತ್ಯವೆನಿಸಿದ ಸೋಂಕಿತರ ಮನೆಗಳಿಗೂ ಇಂತಹ ಮೊಬೈಲ್ ಆಕ್ಸಿಜನ್ ವ್ಯವಸ್ಥೆ ಕಲ್ಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ರೋಗಿಗಳ ಜೀವ ರಕ್ಷಣೆ ಸರ್ಕಾರದ ಮಹತ್ತರ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಇಂತಹ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಜೊತೆಗೆ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಸೌಲಭ್ಯಗಳನ್ನು, ಹೆಚ್ಚುವರಿ ಹಾಸಿಗೆಗಳನ್ನು ಒದಗಿಸುವ ನಿಟ್ಟಿನಲ್ಲಿಯೂ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.