ಬೆಂಗಳೂರು: ಕೊರೋನಾ ಲಾಕ್ಡನ್ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳನ್ನು ಬಳಸಿಕೊಂಡು ಬಡವರು, ನಿರ್ಗತಿಕರಿಗೆ ಆಹಾರ ಪೂರೈಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ 25 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ.
ಮೇ 24 ರ ವರೆಗೆ ಲಾಕ್ಡನ್ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪಿಯಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರ ವಿತರಣೆಗೆ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇದೀಗ 25 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿ ಆದೇಶ.ಹೊರಡಿಸಿದೆ. ಆ ಮೂಲಕ ಬಡವರು, ನಿರ್ಗತಿಕರಿಗೆ ಆಹಾರ ಭದ್ರತೆ ಒದಗಿಸಲು ಮುಂದಾಗಿದೆ.
ಈ ಸಂಬಂಧ ನಿನ್ನೆಯಷ್ಟೇ ಪೌರಾಡಳಿತದ ನಿರ್ದೇಶಕರು ಪತ್ರ ಮುಖೇನ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ. ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟ ನೀಡುವಂತೆ ಈ ಆದೇಶದಲ್ಲಿ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.