ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸಲಾಗುವ ಸಮ್ಮತಿ ಶುಲ್ಕದ ಪರಿಷ್ಕರಣೆಗೆ ಸಂಬಂಧಿಸಿದಂತೆ ನೂತನ ಸೂತ್ರವನ್ನು ರಚಿಸಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಈ ಸಂಬಂಧ ಕೆಲವೇ ದಿನಗಳಲ್ಲಿ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೊರೋನಾ ಸಂಕಷ್ಟ ಎಲ್ಲರನ್ನೂ ಸಮಸ್ಯೆಗೀಡು ಮಾಡಿದೆ. ಕೈಗಾರಿಕೆಗಳು ಮತ್ತು ಉದ್ಯಮಿಗಳ ಮೇಲೆಯೂ ಈ ಪರಿಸ್ಥಿತಿ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಕ್ಷೇತ್ರವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ ಎಂದು ಹೇಳಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುವ ಸಮ್ಮತಿ ಶುಲ್ಕ ಹೆಚ್ಚಾಗಿರುವುದರ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿತ್ತು. ಈ ತಂಡ ಈಗಾಗಲೇ ಒಂದು ಸೂತ್ರವನ್ನು ರಚಿಸಿದೆ. ಕೆಲವೇ ದಿನಗಳಲ್ಲಿ ಮತ್ತೊಂದು ಸಭೆಯ ಮೂಲಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಶೆಟ್ಟರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.