ಬೆಂಗಳೂರು: ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಆದಾಯ ಇಲ್ಲದೇ ಇರುವ ಸಮುದಾಯಗಳಿಗೆ ಪಡಿತರ ಆಹಾರ ವಿತರಣೆ ಮಾಡುವ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಂಡು ಮೇ 13 ರೊಳಗಾಗಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಈ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದಲ್ಲಿ ವಿಭಾಗೀಯ ಪೀಠ ಲಾಕ್ಡೌನ್ ಕಾರಣದಿಂದ ಜನರಿಗೆ ಆದಾಯವಿಲ್ಲದೇ ಪರಿತಪಿಸುವಂತಾಗಿದೆ. ಅಂತಹ ನಾಗರಿಕರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಹಾರ ಪೂರೈಕೆಗೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ಇದೇ ಸಂದರ್ಭದಲ್ಲಿ ಆಮ್ಲಜನಕ ಅಗತ್ಯತೆಗೆ ಸಂಬಂಧಿಸಿದಂತೆ ಸಹ ಕೋರ್ಟ್ಗೆ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಅಲ್ಲದೆ ರಾಜ್ಯಕ್ಕೆ ನಿತ್ಯ 12 ಸಾವಿರ ಟನ್ ಆಮ್ಲಜನಕ ಒದಗಿಸುವಂತೆಯೂ ಈ ಹಿಂದೆಯೇ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.