ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಎದುರಾಗುತ್ತಿರುವ ಹಾಸಿಗೆ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ 1200 ಸ್ಟೆಪ್ಡೌನ್ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ 2000 ಸ್ಟೆಪ್ಡೌನ್ ಆಸ್ಪತ್ರೆಗಳನ್ನು ಸರ್ಕಾರ ನಿರ್ಮಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳ ಅಕ್ಕಪಕ್ಕದಲ್ಲೇ ದೊಡ್ಡ ದೊಡ್ಡ ಹೊಟೇಲ್ಗಳಿದ್ದು, ಇವುಗಳಲ್ಲಿ ರೂಂ ಪಡೆದು ಆಸ್ಪತ್ರೆ ನಿರ್ಮಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 13 ಆಸ್ಪತ್ರೆಗಳ ಜೊತೆಗೆ ಹೊಟೇಲ್ಗಳ ಜೋಡಣೆ ಪ್ರಕ್ರಿಯೆ ನಡೆದಿದೆ. ಇನ್ನಷ್ಟು ಹೊಟೇಲ್ಗಳನ್ನು ಜೋಡಿಸುವ ಕೆಲಸ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಒಂದು ಬಾರಿ ಆಸ್ಪತ್ರೆಗಳ ಜೊತೆಗೆ ಹೊಟೇಲ್ಗಳನ್ನು ಜೋಡಿಸಿದ ಬಳಿಕ ಅಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್, ರೋಗಿಗಳಿಗೆ ಆಹಾರ, ಇತರೆ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಹೊಟೇಲ್ ಸಂಘದ ಬೇಡಿಕೆ ಮೇರೆಗೆ ಪೋರ್ಟಲ್ಗಳ ಜೊತೆಗೆ ಈ ಆಸ್ಪತ್ರೆಗಳ ಜೋಡಣೆ ಮಾಡಲಾಗುತ್ತದೆ. ಬೆಂಗಳೂರಿನಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.