ಮಂಗಳೂರು: ಆಮ್ಲಜನಕ ಟ್ಯಾಂಕರ್ ಖರೀದಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಖನಿಜ ಅಭಿವೃದ್ಧಿ ನಿಧಿ ಯಡಿಯಲ್ಲಿ ಲಭ್ಯವಿರುವ ಹಣವನ್ನು ಬಳಕೆ ಮಾಡಲು ಸಮ್ಮತಿಸಿರುವ ಸಚಿವ ಮುರುಗೇಶ್ ನಿರಾಣಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಅರ್ಪಿಸಿದ್ದಾರೆ.
ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಪೂರಕವಾಗುವಂತಹ ಆಮ್ಲಜನಕ ಟ್ಯಾಂಕರ್ಗಳ ಖರೀದಿಗೆ ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು, ಆ ಮೂಲಕ ಕೊರೋನಾ ಸೋಂಕಿತರ ಚಿಕಿತ್ಸೆಗೆ ನೆರವಾಗಲು ನಿರಾಣಿ ಅನುಕೂಲ ಕಲ್ಪಿಸಿದ್ದಾರೆ. ನಿರಾಣಿ ಅವರ ಕಾರ್ಯಕ್ಕೆ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಗೆ ಆಕ್ಸಿಜನ್ ಸಂಗ್ರಹಕ್ಕೆ ಅನುಕೂಲವಾಗುವಂತೆ ಮತ್ತು ಸಾಗಾಟದ ಅನುಕೂಲಕ್ಕಾಗಿ 24 ಮೆಟ್ರಿಕ್ ಟನ್ ಆಕ್ಸಿಜನ್ ಸಂಗ್ರಹ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕರ್ ಖರೀದಿಗೆ ಸಂಬಂಧಿಸಿದಂತೆ ಎಂಡಿಎಫ್ ನಿಧಿ ಬಳಸಲು ಅನುವು ಮಾಡಿಕೊಡುವಂತೆ ನಿರಾಣಿ ಅವರಿಗೆ ಕಟೀಲ್ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ನಿರಾಣಿ ಅವರಿಗೆ ನಳಿನ್ ಅವರು ಧನ್ಯವಾದ ಸಮರ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.