ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಜೂನ್ 21 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆಯೇ ಈ ಬಾರಿಯೂ ಶಾಲಾ ಕಾಲೇಜುಗಳು ಸ್ಥಗಿತಗೊಂಡಿವೆ. ಕೊರೋನಾ ಹಿನ್ನೆಲೆಯಲ್ಲಿ ಪರಿಸ್ಥಿತಿಗಳ ಅವಲೋಕನ ನಡೆಸಿ ಜೂನ್ 21 ರಿಂದ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಈ ಹಿಂದೆಯೇ ಸುರೇಶ್ ಕುಮಾರ್ ಹೇಳಿದ್ದರು. ಅದರಂತೆ ಸದ್ಯ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದೂಡಿದೆ. ಮುಂದಿನ ಆದೇಶದ ವರೆಗೆ ಈ ನಿಯಮ ಜಾರಿಯಲ್ಲಿರಲಿದ್ದು, ಬಳಿಕ ಕೊರೋನಾ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.