ಬೆಂಗಳೂರು: ರಾಜ್ಯದಲ್ಲಿ ವಲಸಿಗರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮುಂದಿನ ಕೆಲ ವಾರಗಳಲ್ಲಿ ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೊರೋನಾ ಕೇರ್ ಸೆಂಟರ್ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಕೊರೋನಾ ನಿರ್ವಹಣಾ ಸಮಿತಿಯನ್ನು ಸ್ಥಾಪನೆ ಮಾಡಲಾಗಿದೆ. ಇವುಗಳು ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ ಶಾಲೆಗಳು, ಹಾಸ್ಟೆಲ್ಗಳಂತಹ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸುವುದು, ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಕೊರೋನಾ ಕೇರ್ ಸೆಂಟರ್ ಆರಂಭ ಮಾಡುವುದು, ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತರ ನೆರವು ಪಡೆಯುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.
ನಗರಗಳಿಂದ ಲಾಕ್ಡೌನ್ ಹಿನ್ನೆಲೆಯಲ್ಲಿ ಹಳ್ಳಿಗೆ ಬರುತ್ತಿರುವ ಜನರ ಮೇಲೆ ನಿಗಾ ವಹಿಸುವ, ಅಗತ್ಯ ಬಿದ್ದರೆ ಕೊರೋನಾ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡುವ ಕೆಲಸಗಳನ್ನು ಈ ಸಮಿತಿಗಳು ಮಾಡಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.