ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕುಸಿಯುತ್ತಿರುವುದಾಗಿ ತಜ್ಞರು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ಅಂಕಿ ಅಂಶಗಳು ತಿಳಿಸುತ್ತಿವೆ.
ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಕೊರೋನಾ ಮಾದರಿ ಪರೀಕ್ಷೆಗಳ ಸಂಖ್ಯೆ ಸಹ ಇಳಿಕೆಯಾಗಿದೆ. ಇದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದನ್ನು ಸೂಚಿಸುತ್ತಿದೆ. ಕಳೆದ ಕೆಲ ದಿನಗಳಲ್ಲೇ ಆರ್ಟಿಪಿಸಿಆರ್ ಪರೀಕ್ಷೆಗಳ ಸಂಖ್ಯೆ ಸುಮಾರು 30 ಸಾವಿರದಷ್ಟು ಕಡಿಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಮೇ ಮೊದಲ ವಾರದಲ್ಲಿ 1.5 ಲಕ್ಷ ಗಳಷ್ಟು ಪರೀಕ್ಷೆಗಳನ್ನು ನಡೆಸುತ್ತಿದ್ದರೆ, ಮೇ 9 ರ ಬಳಿಕ 1.2 ಲಕ್ಷ ಗಳಿಗೆ ಇಳಿಕೆಯಾಗಿದೆ. ಇದಕ್ಕೆ ಪೂರಕ ಎಂಬಂತೆ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಸಹ ಇಳಿಮುಖವಾಗುತ್ತಿದೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 24 ಸಾವಿರದಿಂದ 16 ಸಾವಿರ ಗಳಿಗೆ ಇಳಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಇನ್ನು ಕೊರೋನಾ ಮಾದರಿ ಪರೀಕ್ಷೆಗೆ ಸಂಬಂಧಿಸಿದಂತೆ ಆರ್ಟಿಪಿಸಿಆರ್ ನಡೆಸುವ ಸಂದರ್ಭದಲ್ಲಿ ಪರೀಕ್ಷೆ ಮಾಡಿಸಿಕೊಂಡವರ ಮಾಹಿತಿಯನ್ನು ಆನ್ಲೈನ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಇದು ಕೊರೋನಾ ಪ್ರಮಾಣಗಳ ಮೇಲೆ ನಿಗಾ ವಹಿಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ.
ಇನ್ನು ಕೊರೋನಾ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಹೇಳಿಕೆಯಲ್ಲಿ 10.5 ಲಕ್ಷ ಪರೀಕ್ಷಾ ಆರ್ಎಟಿ ಕಿಟ್ಗಳನ್ನು ಒಳಗೊಂಡಿದೆ. ಇದು ಮುಂದಿನ 7 ದಿನಗಳ ವರೆಗೆ ಪರೀಕ್ಷೆ ನಡೆಸಲು ಬಳಸಬಹುದಾಗಿದೆ. ಹೆಚ್ಚುವರಿ 50 ಸಾವಿರ ಕಿಟ್ಗಳನ್ನು ಪೂರೈಕೆ ಮಾಡಲಾಗುತ್ತದೆ. ಹಾಗೆಯೇ 37 ಲಕ್ಷ ಆರ್ಟಿಪಿಸಿಆರ್ ಕಿಟ್ಗಳನ್ನು ಖರೀದಿಸಲು ನಿರ್ಧರಿಸುವುದಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.