ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಕೊರೋನಾ ಲಸಿಕೆ ಕೊರತೆ ಸಮಸ್ಯೆ ಶೀಘ್ರ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
ಬಸವ ಜಯಂತಿ ಪ್ರಯುಕ್ತ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಸವೇಶ್ವರ ನಗರದ ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದರು.
ಬಸವೇಶ್ವರ ಶ್ರಮ ಗೌರವವನ್ನು ಎತ್ತಿ ಹಿಡಿದು ಕಾಯಕ ತತ್ವದ ಮಹತ್ವ ಸಾರಿದ ಬಸವಣ್ಣನವರ ಜೀವನಾದರ್ಶಗಳನ್ನು ಪಾಲಿಸೋಣ. ಸಮಾಜಕ್ಕೆ ಸರಿಯಾದ ಮಾರ್ಗ ತೋರಿಸಿದ ಬಸವಣ್ಣನವರ ಉಪದೇಶಗಳನ್ನು ಅರಿತು, ಅಳವಡಿಸಿ ಸಾರ್ಥಕ ಜೀವನ ನಡೆಸೋಣ ಎಂದು ಯಡಿಯೂರಪ್ಪ ಹಳಿದರು.
ಹಾಗೆಯೇ ಜಾಗತಿಕ ಸಮಸ್ಯೆ ಕೊರೋನಾ ಸಂಬಂಧ ರಾಜ್ಯದ ಜನರಿಗೆ ನೀಡಲು ಅಗತ್ಯ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಆಹ್ವಾನಿಸಲಾಗಿದೆ. ಸದ್ಯದಲ್ಲೇ ರಾಜ್ಯಕ್ಕೆ ಅವಶ್ಯಕ ಲಸಿಕೆ ದೊರೆಯಲಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.