ಹಾವೇರಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ತಮ್ಮ ಮನೆಯನ್ನೇ ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾದರಿಯಾಗಿದ್ದಾರೆ.
ಶಿಗ್ಗಾಂವಿಯಲ್ಲಿನ ತಮ್ಮ ನಿವಾಸದ ವೆರಾಂಡದಲ್ಲಿ 50 ಹಾಸಿಗೆಗಳ ವ್ಯವಸ್ಥೆ, ಆಕ್ಸಿಜನ್ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅಗತ್ಯ ನೆರವು ಕಲ್ಪಿಸಿದ್ದಾರೆ. ಈ ಸೆಂಟರ್ನಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು, ದಾದಿಯರ ನೇಮಕ ಸಹ ಮಾಡಲಾಗಿದೆ. ಶೀಘ್ರ 50 ಆಮ್ಲಜನಕ ಕಾನ್ಸನ್ಟ್ರೇಟರ್ಗಳು ಬರಲಿವೆ. ಅವುಗಳನ್ನು ಪ್ರತಿ ಬೆಡ್ಗೆ ಅಳವಡಿಸುವ ಸಂಬಂಧವೂ ಕ್ರಮ ಕೈಗೊಳ್ಳಲಾಗಿದೆ.
ಶಿಗ್ಗಾಂವಿಯಲ್ಲಿನ ಹಾಸಿಗೆಗಳ ಕೊರತೆ ನಿವಾರಣೆಗೆ ಬೊಮ್ಮಾಯಿ ಅವರ ಈ ಕ್ರಮ ಹೆಚ್ಚು ಪೂರಕವಾಗಿದೆ. ಇಲ್ಲಿ 24×7 ಸಮಯವೂ ಚಿಕಿತ್ಸೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.