ಬೆಂಗಳೂರು: ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯಪಾಲ ವಜುಬಾಯ್ ವಾಲಾ ಅವರನ್ನು ಭೇಟಿಯಾದರು.
ನಿನ್ನೆಯಷ್ಟೇ ಪ್ರತಿಪಕ್ಷಗಳ ನಾಯಕರುಗಳು ರಾಜ್ಯಪಾಲರನ್ನು ಭೇಟಿಯಾಗಿ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು ಸಿದ್ದರಾಮಯ್ಯರನ್ನು ರಾಜ್ಯಪಾಲರು ತಮ್ಮ ಬಳಿ ಕರೆಸಿಕೊಂಡಿದ್ದರು.
ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ‘ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸಂಪೂರ್ಣ ಮಾಹಿತಿ ನೀಡಿದ್ದೇನೆ. ಸಿಐಡಿ ತನಿಖೆಯ ಮಾಹಿತಿಯನ್ನೂ ಒದಗಿಸಿದ್ದೇನೆ’ ಎಂದರು.
ಸಿಬಿಐಗೆ ತನಿಖೆಗೆ ಆಗ್ರಹಿಸಿ ಇಡೀ ಕರ್ನಾಟಕದ ಜನತೆ ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮಾತ್ರ ತನ್ನ ಪಟ್ಟನ್ನು ಸಡಿಲಗೊಳಿಸುತ್ತಿಲ್ಲ. ಸಿದ್ದರಾಮಯ್ಯ ತನ್ನ ಮೊಂಡು ಹಠವನ್ನು ಇದೇ ರೀತಿ ಮುಂದುವರೆಸಿದರೆ ರಾಜ್ಯದ ಜನತೆ ಅವರಿಗೆ ತಕ್ಕ ಪಾಠವನ್ನೇ ಕಲಿಸುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.