ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ತೌಕ್ತೆ ಚಂಡಮಾರುತದ ಪ್ರಭಾವ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು, ಉತ್ತರ ಕನ್ನಡಗಳ ಮೇಲೂ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಭಾಗದ ಜಿಲ್ಲೆಗಳಲ್ಲಿ 20 ಸೆಂ. ಮೀ. ಗೂ ಅಧಿಕ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತೌಕ್ತೆ ಚಂಡಮಾರುತ ಗಂಟೆಗೆ 50 ರಿಂದ 160 ಕಿ ಮೀ ವೇಗದಲ್ಲಿ ಬೀಸುತ್ತಿದ್ದು, ಈ ವೇಗ 175 ಕಿಲೋ ಮೀಟರ್ಗೂ ಅಧಿಕ ವೇಗ ಪಡೆಯುವ ಎಲ್ಲಾ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಮಾತ್ರವಲ್ಲದೆ ಕೇರಳದಲ್ಲಿಯೂ ತೀವ್ರ ಮಳೆಯಾಗುತ್ತಿದೆ. ಕಾಸರಗೋಡು, ಕಣ್ಣೂರು, ಮಲಪ್ಪುರಂ, ಸೇರಿದಂತೆ ದೇಶದ ಇತರ ರಾಜ್ಯಗಳ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆಯೂ ಹವಾಮಾನ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.